ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಸಿನಿಮಾದ ಫಸ್ಟ್ ಲುಕ್ ರಿಲೀಸ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ಜೀವನಾಧಾರಿತ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಚಿತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯಾಗಿ ಬಾಲಿವುಡ್ ನಟ ವಿವೇಕ್ ಒಬೇರಾಯ್ ನಟಿಸುತ್ತಿದ್ದು, ಫಸ್ಟ್ ಫೋಸ್ಟರ್ ನಲ್ಲಿ ಒಬೇರಾಯ್ ಪ್ರಧಾನಿಯಂತೆ ಕಾಣಿಸುತ್ತಿರುವುದು ವಿಶೇಷತೆಯಾಗಿದೆ.
ತುಂಬಾ ವರ್ಷಗಳಿಂದ ತೆರೆಮರೆಯಲ್ಲಿದ್ದ ವಿವೇಕ ಒಬೆರಾಯ್ ದೊಡ್ಡದೊಂದು ಅವಕಾಶಕ್ಕಾಗಿ ಕಾಯುತ್ತಿದ್ದರು. ಆ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರ ಜೀವನಾಧಾರಿತ ಸಿನಿಮಾ ವಿವೇಕ್ ಸಿನಿ ಜೀವನಕ್ಕೆ ನೆರವಾಗಲಿದೆ ಎಂಬುದು ಆಪ್ತರ ಅನಿಸಿಕೆಯಾಗಿದೆ.
ಚಲನಚಿತ್ರ ಮಾರುಕಟ್ಟೆ ವಿಶ್ಲೇಷಕ ತರಣ್ ಆದರ್ಶ್ ತಮ್ಮ ಟ್ವೀಟರ್ ನಲ್ಲಿ ಸಿನಿಮಾದ ಫಸ್ಟ್ ಲುಕ್ ಅನ್ನು ಹಂಚಿಕೊಂಡಿದ್ದು, ವಿವೇಕ್ ಆನಂದ್ ಒಬೆರಾಯ್(ವಿವೇಕ್ ಒಬೆರಾಯ್) ನರೇಂದ್ರ ಮೋದಿ ಜೀವನಾಧಾರಿತ ಸಿನಿಮಾದ ಹೀರೋ..ಪ್ರಧಾನಿ ನರೇಂದ್ರ ಮೋದಿ ಸಿನಿಮಾದ ಮೊದಲ ಪೋಸ್ಟರ್ ಅನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ 23 ಭಾಷೆಯಲ್ಲಿ ಬಿಡುಗಡೆಗೊಳಿಸಿದ್ದಾರೆ.
https://twitter.com/taran_adarsh/status/1082229787186335744https://twitter.com/taran_adarsh/status/1082229787186335744
Vivek Anand Oberoi [Vivek Oberoi] to star in Narendra Modi biopic, titled #PMNarendraModi... The first look poster was launched in 23 languages by Maharashtra CM Devendra Fadnavis... Directed by Omung Kumar... Produced by Suresh Oberoi and Sandip Ssingh. pic.twitter.com/K0HdjhFVtj— taran adarsh (@taran_adarsh) January 7, 2019