Friday, 4 January 2019

ಸ್ಯಾಂಡಲ್ವುಡ್ ಸ್ಟಾರ್ ನಟ, ನಿರ್ಮಾಪಕರ ಮನೆ ಮೇಲೆ ಮುಂದುವರೆದ ಐಟಿ ದಾಳಿ, ಏನೆಲ್ಲಾ ಸಿಕ್ತು?
   ಬೆಂಗಳೂರು: ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. 

 
ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು ಜಯಣ್ಣ ಅವರ ಮನೆಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಳಿ ನಡೆಸಿ ಮಾಹಿತಿ ಕಲೆಹಾಕುತ್ತಿದ್ದಾರೆ.
ಇನ್ನು ಜೆ.ಪಿ ನಗರದಲ್ಲಿರುವ ನಟ ಸುದೀಪ್ ಮನೆ, ಸದಾಶಿವನಗರದಲ್ಲಿರುವ ಶಿವರಾಜ್ ಕುಮಾರ್ ಹಾಗೂ ಪುನೀತ್ ಮನೆ, ಕತ್ರಿಗುಪ್ಪೆಯಲ್ಲಿರುವ ನಟ ಯಶ್ ಮನೆ ಮೇಲೆ ಏಕಕಾಲಕ್ಕೆ ಅಧಿಕಾರಿಗಳು ದಾಳಿ ನಡೆಸಿ ಆದಾಯದ ವಿವರಣೆಯನ್ನು ಕಲೆ ಹಾಕುತ್ತಿದ್ದಾರೆ.
ಸದ್ಯ ಐಟಿ ಅಧಿಕಾರಿಗಳು ದಾಳಿಯಲ್ಲಿ ನಟರು, ನಿರ್ಮಾಪಕರ ಮನೆಯಲ್ಲಿ ಆಸ್ತಿ ವಿವರ, ಆದಾಯ ಮೂಲ, ಚಿನ್ನಾಭರಣ ಸೇರಿದಂತೆ ಬ್ಯಾಂಕ್ ಖಾತೆಗಳ ವಿವರ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.

No comments:

Post a Comment

ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಸಿನಿಮಾದ ಫಸ್ಟ್ ಲುಕ್ ರಿಲೀಸ್ ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ಅವರ ಕುರಿತ ಜೀವನಾಧಾರಿತ ಸಿನಿಮಾದ ಫಸ್ಟ್ ಲುಕ್...