"ದಾಖಲೆ ಸಲ್ಲಿಸಲು ಸ್ವಲ್ಪ ಕಾಲಾವಕಾಶ ಕೊಡಿ’
ಬೆಂಗಳೂರು: ಶುಕ್ರವಾರವೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮನೆ ಮೇಲೆ ಐಟಿ ದಾಳಿ ಮುಂದುವರಿದಿದೆ. ಪುನೀತ್ ಮತ್ತು ಪತ್ನಿ ಅಶ್ವಿನಿ ಅವರನ್ನು ಐಟಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.
ಐಟಿ ಅಧಿಕಾರಿಗಳು ಕೇಳುತ್ತಿರುವ ಪ್ರಶ್ನೆಗಳಿಗೆ ಪುನೀತ್ ರಾಜ್‍ಕುಮಾರ್ ಉತ್ತರಿಸುತ್ತಿದ್ದು, ನನ್ನ ವ್ಯವಹಾರದ ಬಗ್ಗೆ ನನ್ನ ಬಳಿ ದಾಖಲೆ ಇವೆ. ಆದರೆ ದಾಖಲೆ ಸಲ್ಲಿಸಲು ಸ್ವಲ್ಪ ಸಮಯ ಬೇಕು. ಸಾಕಷ್ಟು ವ್ಯವಹಾರ ಮಾಡಿರುವುದರಿಂದ ಸ್ವಲ್ಪ ಗೊಂದಲವಿದೆ. ಪ್ರತಿಯೊಂದಕ್ಕೂ ರಶೀದಿ ಇಟ್ಟಿದ್ದೀನಿ. ಹೀಗಾಗಿ ದಾಖಲೆ ಸಲ್ಲಿಸಲು ಸ್ವಲ್ಪ ಕಾಲಾವಕಾಶ ಕೊಡಿ ಎಂದು ನಟ ಪುನೀತ್ ಸಮಾಧಾನವಾಗಿಯೇ ಅಧಿಕಾರಿಗಳ ಬಳಿ ಕಾಲವಕಾಶ ಕೇಳಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
No comments:
Post a Comment